ಶ್ರೀ ವಿಶ್ವೇಶತೀರ್ಥ ಸ್ಮರಣಾರ್ಥ ಸ್ಮೃತಿ ವನ: ಮೇ 7 ರಂದು ಭೂಮಿ ಪೂಜೆ

ಉಡುಪಿ:ಶ್ರೀ ಪೇಜಾವರ ಮಠದ ಪದ್ಮವಿಭೂಷಣ ಪುರಸ್ಕೃತ ಕೀರ್ತಿಶೇಷ ಶ್ರೀ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರ ಸ್ಮರಣಾರ್ಥ ಉಡುಪಿ ಜಿಲ್ಲೆಯ ನೀಲಾವರ ಗ್ರಾಮದಲ್ಲಿ (ಗೋಶಾಲೆ ಸಮೀಪ ) ನಿರ್ಮಾಣವಾಗಲಿರುವ ಸ್ಮೃತಿ ವನಕ್ಕೆ ಭೂಮಿ ಪೂಜಾ ಕಾರ್ಯಕ್ರಮವು ಇದೇ ಬರುವ ಮೇ 7 ನೇ ತಾರೀಖು ಶನಿವಾರ ಮುಂಜಾನೆ 9.30 ಕ್ಕೆ ನಡೆಯಲಿದೆ.‌ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ದಿವ್ಯ ಸಾನ್ನಿಧ್ಯದಲ್ಲಿ ಸಮಾರಂಭ ನಡೆಯಲಿದ್ದು ರಾಜ್ಯದ ಅರಣ್ಯ ಮಂತ್ರಿ ಶ್ರೀ ಉಮೇಶ ವಿ ಕತ್ತಿಯವರು ಮುಖ್ಯ ಅಭ್ಯಾಗತರಾಗಿ […]