ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂತ ಸಮಾವೇಶ: ದೇಶದಲ್ಲಿ ಗೋಹತ್ಯೆ ನಿಷೇಧ ಸೇರಿ ಮೂರು ಪ್ರಮುಖ ನಿರ್ಣಯ
ಉಡುಪಿ: ಗೋ ಹತ್ಯೆ ನಿಷೇಧ, ಏಕರೂಪ ನಾಗರಿಕ ಸಂಹಿತೆ ಜಾರಿ ಹಾಗೂ ಜನಾಸಂಖ್ಯಾ ಸ್ಫೋಟ ತಡೆಗೆ ಕಾನೂನು ಈ ಮೂರು ಪ್ರಮುಖ ನಿರ್ಣಯಗಳನ್ನು ಗುರುವಾರ ಉಡುಪಿ ಶ್ರೀಕಷ್ಣಮಠದ ರಾಜಾಂಗಣದಲ್ಲಿ ನಡೆದ ಸಂತ ಸಮಾವೇಶದಲ್ಲಿ ಕೈಗೊಳ್ಳಲಾಯಿತು. ಈ ನಿರ್ಣಯವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲು ತೀರ್ಮಾನಿಸಲಾಯಿತು. ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿಯ ನೇತೃತ್ವದಲ್ಲಿ ಕೈಗೊಳ್ಳಲಾದ ನಿರ್ಣಯಗಳಿಗೆ ಸಮಾವೇಶದಲ್ಲಿ ಭಾಗವಹಿಸಿದ್ದ ವಿವಿಧ ಮಠಗಳ ಸಾಧು ಸಂತರು ಒಕ್ಕೊರಲಿನಿಂದ ಒಪ್ಪಿಗೆ ಸೂಚಿಸಿದರು. ಈ ನಿರ್ಣಯಗಳನ್ನು ಆದಷ್ಟು ಬೇಗ ಜಾರಿಗೆ ತರಬೇಕೆಂದು ಆಗ್ರಹಪಡಿಸಿದರು.