ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಭೇಟಿ
ಉಡುಪಿ: ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಇದರ ಅಧ್ಯಕ್ಷರಾದ ಶಿವಾನಂದ ತಗಡೂರು ಹಾಗೂ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟ ನವದೆಹಲಿ ಇದರ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಬಿ.ಮದನ ಗೌಡ ಇವರು ಆಗಮಿಸಿ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.ಈ ಸಂದರ್ಭದಲ್ಲಿ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪ್ರಮೋದ್ ಸುವರ್ಣ,ಸಂಚಾಲಕರಾದ ಪುಂಡಲೀಕ ಮರಾಠೆ,ಕಾರ್ಯದರ್ಶಿಗಳಾದ ವಾದಿರಾಜ ನಡಿಮನೆ ಉಪಸ್ಥಿತರಿದ್ದರು.