ಶ್ರೀಕೃಷ್ಣ ಮಠ: ಗಣೇಶ ಮೂರ್ತಿ ವಿಸರ್ಜನೆ
ಉಡುಪಿ: ಶ್ರೀಕೃಷ್ಣ ಮಠದಲ್ಲಿ, ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು,ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು,ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಯತಿಗಳಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ರಥಬೀದಿಯಲ್ಲಿ ಮೆರವಣಿಗೆಯೊಂದಿಗೆ ಮಧ್ವಸರೋವರದಲ್ಲಿ ಗಣಪತಿ ವಿಸರ್ಜನೆ ನಡೆಯಿತು.