ಶ್ರೀಲಂಕಾ ನೂತನ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ನೇಮಕ.

ಕೊಲಂಬೊ: ಶ್ರೀಲಂಕಾದ ನೂತನ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಅವರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ್ದು, 2000ನೇ ಇಸವಿಯಲ್ಲಿ ಸಿರಿಮಾವೋ ಬಂಡಾರನಾಯಕೆ ನಂತರ ಪ್ರಧಾನಿ ಹುದ್ದೆ ಅಲಂಕರಿಸಿದ ಎರಡನೇ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. 54 ವರ್ಷದ ನ್ಯಾಷನಲ್ ಪೀಪಲ್ಸ್ ಪವರ್(ಎನ್‌ಪಿಪಿ) ನಾಯಕಿಗೆ ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ ಅವರು ಪ್ರಮಾಣ ವಚನ ಬೋಧಿಸಿದರು. ದಿಸ್ಸಾನಾಯಕೆ ಅವರೇ ಹರಿಣಿ ಅಮರಸೂರ್ಯ ಅವರನ್ನು ಪ್ರಧಾನಿಯಾಗಿ ನೇಮಕ ಮಾಡಿದ್ದು, ಅವರೊಂದಿಗೆ ಮೂವರು ಸಚಿವರನ್ನು ಸಹ ನೇಮಕ ಮಾಡಿದ್ದಾರೆ. ಹರಿಣಿ ಅಮರಸೂರ್ಯ […]