ಕೊಲ್ಲೂರು ದೇವಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಶ್ರೀಲಂಕಾ‌ ಪ್ರಧಾನಿ‌ ರೆನಿಲ್ ವಿಕ್ರಮ್ ಸಿಂಘೆ

ಕುಂದಾಪುರ: ಶ್ರೀಲಂಕಾ‌ ಪ್ರಧಾನಿ‌ ರೆನಿಲ್ ವಿಕ್ರಮ್ ಸಿಂಘೆ ಶುಕ್ರವಾರ ಬೆಳಿಗ್ಗೆ 11.30 ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ಆಗಮಿಸಿದರು. ಮಂಗಳೂರು ವಿಮಾನ‌ನಿಲ್ದಾಣದಿಂದ‌ ರಸ್ತೆ ಮಾರ್ಗದ ಮೂಲಕ ನೇರವಾಗಿ ಕೊಲ್ಲೂರಿಗೆ ಆಗಮಿಸಿದ ಅವರು ವಸತಿಗೃಹಕ್ಕೆ ತೆರಳಿ ಐದು ನಿಮಿಷ ವಿಶ್ರಾಂತಿ ಪಡೆದು ಬಳಿಕ ದೇವಸ್ಥಾನಕ್ಕೆ ಆಗಮಿಸಿದ್ದಾರೆ. ದೇವರ ದರ್ಶನ ಪಡೆದ ಅವರು ಈಗಾಗಲೇ ಯಜ್ಞಶಾಲೆಯಲ್ಲಿ ನಡೆಯುತ್ತಿರುವ ನವಚಂಡಿಯಾಗದ ಪೂರ್ಣಾಹುತಿಯಲ್ಲಿ ಪಾಲ್ಗೊಂಡರು.