ಶ್ರೀಲಂಕಾ ಪ್ರಧಾನಿ ಭೇಟಿ ಹಿನ್ನೆಲೆ: ಕೊಲ್ಲೂರಿನಲ್ಲಿ ಬಿಗು ಪೊಲೀಸ್ ಬಂದೋಬಸ್ತ್

ಕುಂದಾಪುರ: ಶ್ರೀಲಂಕಾ ಪ್ರಧಾನಿ ರೆನಿಲ್ ವಿಕ್ರಮ್ ಸಿಂಘೆ ಕೊಲ್ಲೂರು ಮೂಕಾಂಬಿಕ ದೇವಸ್ಥಾನ ಭೇಟಿ ಹಿನ್ನೆಲೆಯಲ್ಲಿ ಶುಕ್ರವಾರ ದೇವಸ್ಥಾ‌ನದ ವಠಾರದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸುವ ಅವರು, ದೇವರ ದರ್ಶನದ ಬಳಿಕ ನವಚಂಡಿಯಾಗದಲ್ಲಿ ಪಾಲ್ಗೊಂಡು ಬಳಿಕ ಮಂಗಳೂರಿಗೆ ತೆರಳಲಿದ್ದಾರೆ. ಕಳೆದ ಎರಡು ತಿಂಗಳ‌ ಹಿಂದಷ್ಟೆ ಈಸ್ಟರ್ ದಿನದಂದು ಶ್ರೀಲಂಕಾದ ಕೊಲೊಂಬೊದಲ್ಲಿ ನಡೆದ ಬಾಂಬ್ ದಾಳಿಯ ಹಿನ್ನೆಲೆಯಲ್ಲಿ ಶ್ರೀಲಂಕಾ ಪ್ರಧಾನಿಯವರಿಗೆ ಹೆಚ್ಚುವರಿ ಭದ್ರತೆ ಕಲ್ಪಿಸಲು ಉಡುಪಿ ಜಿಲ್ಲಾಡಳಿತ ಮುಂದಾಗಿದ್ದು, […]