ಶ್ರೀಲಂಕ ಭಯೋತ್ಪಾದಕ ದಾಳಿ- ಮೃತ ಆತ್ಮಗಳಿಗೆ ಶಾಂತಿ ಕೋರಿ ಉಡುಪಿ ಕ್ರೈಸ್ತ ಭಾಂಧವರಿಂದ ಪ್ರಾರ್ಥನಾ ಸಭೆ

ಉಡುಪಿ: ಶ್ರೀಲಂಕಾದ ಕೊಲಂಬೊ ನಗರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತರಾದವರಆತ್ಮಕ್ಕೆ ಶಾಂತಿ ಕೋರಿ ಉಡುಪಿ ಜಿಲ್ಲೆಯ ಕ್ರೈಸ್ತ ಭಾಂಧವರಿಂದ ಶೋಕಮಾತಾ ಇಗರ್ಜಿಯಲ್ಲಿ ಪ್ರಾರ್ಥನಾ ಸಭೆ ಜರುಗಿತು.ಸಭೆಯಲ್ಲಿ ವಿವಿಧ ಸಭೆಗಳ ಧರ್ಮಗುರುಗಳು ಹಾಗೂ ಕ್ರೈಸ್ತ ಭಾಂಧವರು ಭಾಗವಹಿಸಿ ಮೃತಆತ್ಮಗಳಿಗೆ ಸದ್ಗತಿ ಕೋರಿ ಪ್ರಾರ್ಥಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಏಪ್ರೀಲ್ 21 ಜಗತ್ತಿನಾದ್ಯಂತ ಪಾಸ್ಕ ಹಬ್ಬದಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವ ಸಮಯದಲ್ಲಿ ಶ್ರೀಲಂಕಾದ ಜನತೆಗೆ ಕರಾಳ ದಿನವಾಯಿತು.   […]