ಔಷಧಿಗಳಿಗಾಗಿ ಭಾರತಕ್ಕೆ ಮನವಿ ಮಾಡಿದ ಶ್ರೀಲಂಕಾ ಕ್ರಿಕೆಟಿಗ ಸನತ್ ಜಯಸೂರ್ಯ
ದೆಹಲಿ: ಶ್ರೀಲಂಕಾದ ಮಾಜಿ ನಾಯಕ ಸನತ್ ಜಯಸೂರ್ಯ ಶ್ರೀಲಂಕಾದ ಭಾರತೀಯ ಹೈಕಮಿಷನರ್ ಗೋಪಾಲ್ ಬಾಗ್ಲೇ ಅವರನ್ನು ಭೇಟಿಯಾಗಿ ದ್ವೀಪ ರಾಷ್ಟ್ರಕ್ಕೆ ಅಗತ್ಯವಾದ ಔಷಧಿಗಳನ್ನು ಪೂರೈಸಲು ಭಾರತದ ಸಹಾಯವನ್ನು ಕೇಳಿದ್ದಾರೆ. ಗುರುವಾರ (ಏಪ್ರಿಲ್ 28) ಭಾರತೀಯ ಹೈಕಮಿಷನರ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಸನತ್ ಅವರು ಮನವಿ ಮಾಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಶ್ರೀಲಂಕಾದ ನ್ಯೂಸ್‌ವೈರ್ ವರದಿ ಮಾಡಿದೆ. ಈ ಸಂದರ್ಭದಲ್ಲಿ ಔಷಧಿಗಳು ಸೇರಿದಂತೆ ಅಗತ್ಯ ಸಾಮಗ್ರಿಗಳ ರೂಪದಲ್ಲಿ ಭಾರತದ ಬೆಂಬಲವನ್ನು ಅವರು ಶ್ಲಾಘಿಸಿದ್ದಾರೆ. “ಹೈ ಕಮಿಷನರ್ ಅವರು ಕ್ರಿಕೆಟ್ […]
ಶ್ರೀಲಂಕಾ ಸ್ಫೋಟದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಶಾಂತಿ, ಪ್ರೀತಿ ಅಹಿಂಸೆಯಿಂದ ಜಗತ್ತು ಗೆಲ್ಲಲು ಸಾಧ್ಯ: ಜೆರಾಲ್ಡ್ ಐಸಾಕ್
ಉಡುಪಿ: ಶ್ರೀಲಂಕಾದಲ್ಲಿ ಉಗ್ರರ ಸ್ಫೋಟಕ್ಕೆ ಮೃತರಾದವರಿಗೆ ಗುರುವಾರ ನಗರದ ಶೋಕಮಾತ ಇಗರ್ಜಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ಅವರು ಮಾತನಾಡಿ ಭಯೋತ್ಪಾದನೆ, ಹಿಂಸೆ, ದ್ವೇಷ ಹಾಗೂ ಕ್ರೂರ ಕೃತ್ಯಗಳಿಂದ ಜಗತ್ತನ್ನು ನಾಶ ಮಾಡಲು ಸಾಧ್ಯವಿಲ್ಲ. ಬದಲಾಗಿ ಶಾಂತಿ, ಪ್ರೀತಿ, ಅಹಿಂಸೆ ಹಾಗೂ ಕ್ಷಮೆಯ ಮೂಲಕ ಜಗತ್ತನ್ನು, ಮಾನವ ಕುಲವನ್ನು ಜಯಿಸಲು ಸಾಧ್ಯ’ ಎಂದರು. ತಮ್ಮದಲ್ಲದ ತಪ್ಪಿಗೆ ನೂರಾರು ಮಂದಿ ಬಲಿಯಾಗಿದ್ದಾರೆ. ಈ ಕ್ರೂರ ಕೃತ್ಯವನ್ನು ಇಡೀ ಜಗತ್ತು ಖಂಡಿಸುತ್ತದೆ. […]