ಈಸ್ಟರ್ ಹಬ್ಬದಂದೇ ಲಂಕಾದ 3 ಚರ್ಚ್, ಹೋಟೆಲ್ ಸೇರಿ 8 ಕಡೆ ಸರಣಿ ಸ್ಫೋಟ: ಸಾವಿನ ಸಂಖ್ಯೆ 185ಕ್ಕೆ ಏರಿಕೆ
ನವದೆಹಲಿ: ಶ್ರೀಲಂಕಾ ಕೊಲಂಬೋದಲ್ಲಿ 8ನೇ ಬಾಂಬ್ ಸ್ಫೋಟವಾಗಿದೆ. ಇಲ್ಲಿಯವರೆಗೂ ಸುಮಾರು 8 ಕಡೆ ಬಾಂಬ್ ಸ್ಫೋಟ ಸಂಭವಿಸಿದ್ದು, 185ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ. ಹಾಗಾಗಿ ಶ್ರೀಲಂಕಾ ಸರ್ಕಾರ ದೇಶಾದ್ಯಂತ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಸಂಜೆ 6 ರಿಂದ ನಾಳೆ ಬೆಳಗ್ಗೆ 6 ಗಂಟೆವರೆಗೆ ಕರ್ಫ್ಯೂ ಜಾರಿಯಲ್ಲಿದ್ದು, ಸದ್ಯ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇಂದು ಭಾನುವಾರ ಬೆಳಗ್ಗೆಯಿಂದಲೇ ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಿ ಸರಣಿ ಬಾಂಬ್ ಸ್ಫೋಟ ನಡೆಯುತ್ತಿದೆ. ಈಸ್ಟರ್ ದಿನ ಪ್ರಾರ್ಥನೆ ನಡೆಯುತ್ತಿರುವಾಗ ಚರ್ಚ್‌ನಲ್ಲಿ ಮೊದಲು ಬಾಂಬ್ ಸ್ಫೋಟವಾಯಿತು. ಬಳಿಕ ಹೋಟೆಲ್‌ನಲ್ಲಿ ಸ್ಫೋಟ […]