ಶಬರಿಮಲೆಗೆ ಮಹಿಳಾ ಪ್ರವೇಶ ವಿರೋಧಿಸಿ ಮೌನ ಮೆರವಣಿಗೆ
ಉಡುಪಿ: ಶಬರಿಮಲೆಗೆ ಮಹಿಳಾ ಪ್ರವೇಶವನ್ನು ವಿರೋಧಿಸಿ ಶ್ರೀರಾಮ ಸೇನೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಣಿಪಾಲದ ಉಪೇಂದ್ರ ಪೈ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಶನಿವಾರ ಮೌನ ಮೆರವಣಿಗೆ ನಡೆಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ಕೇರಳದ ಶಬರಿಮಲೆ ದೇಗುಲ ತನ್ನದೇ ಆದ ಸಂಪ್ರದಾಯವನ್ನು ಆಚರಿಸಿಕೊಂಡು ಬಂದಿದೆ. ಅದಕ್ಕೆ ಕಾನೂನಿನ ಮೂಲಕ ತಡೆಯೊಡ್ಡುವುದು ಸರಿಯಲ್ಲ. ಆದ್ದರಿಂದ ಕೇಂದ್ರ ಸರಕಾರ ಸುಗ್ರಿವಾಜ್ಞೆ ಹೊರಡಿಸಿ, ಸುಪ್ರೀಂ ಕೋರ್ಟ್ ನ ಆದೇಶಕ್ಕೆ ತಡೆಯಾಜ್ಞೆ ನೀಡಬೇಕೆಂದು ಜಿಲ್ಲಾಧ್ಯಕ್ಷ ಜಯರಾಮ್ ಅಂಬೆಕಲ್ಲು ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿ ವಿದ್ಯಾಕುಮಾರಿ […]