ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಿಗೆ ಸರ್ಕಾರಿ ಕ್ವಾರಂಟೈನ್ ಇಲ್ಲ: 14 ದಿನ ಹೋಮ್ ಕ್ವಾರಂಟೈನ್: ಆರೋಗ್ಯ ಸಚಿವ ಶ್ರೀರಾಮುಲು
ಉಡುಪಿ: ಮಹಾರಾಷ್ಟ್ರದಿಂದ ಬರುವವರಿಗೆ ಇನ್ಮುಂದೆ ಸರ್ಕಾರಿ ಕ್ವಾರಂಟೈನ್ ಇರುವುದಿಲ್ಲ. ಅದರ ಬದಲಾಗಿ ಅವರನ್ನು 14 ಕಡ್ಡಾಯವಾಗಿ ಹೋಮ್ ಕ್ವಾರಂಟೈನ್ ಮಾಡಲಾಗುವುದು. ಹಾಗೆಯೇ ಅವರು ಉಳಿದುಕೊಳ್ಳುವ ಮನೆಯನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದರು. ಹೊರರಾಜ್ಯದಿಂದ ಬರುವ ವ್ಯಕ್ತಿಗಳಿಗೆ ಸಂಬಂಧಿಸಿ ರಾಜ್ಯದಲ್ಲಿ ನಿನ್ನೆ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಅದರಂತೆ ಸೀಲ್ ಹಾಕಿಸಿಕೊಂಡು ಹೋಮ್ ಕ್ವಾರಂಟೈನ್ ಆಗುವ ವ್ಯಕ್ತಿ ಮನೆಯಲ್ಲಿಯೇ ಇರಬೇಕು. ಒಂದು ವೇಳೆ ಆತ ಹೊರಬಂದು ಓಡಾಡಿದರೆ […]