ಮೂಲಮಂದಿರ ಚಲೋ ಅಭಿಯಾನ: ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ

ಮಂಡ್ಯ: ಹಿಂದೂ ಸಂಘಟನೆಗಳು ಶನಿವಾರ ಕರೆ ನೀಡಿರುವ “ಮೂಲಮಂದಿರ ಚಲೋ” ಅಭಿಯಾನದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದು ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಸೆಕ್ಷನ್ 144 ಸಿಆರ್‌ಪಿಸಿ ಜಾರಿಯಾಗಿದ್ದು, ಜಾಮಿಯಾ ಮಸೀದಿಯ ಆವರಣದ ಸುತ್ತ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನ ಎಂದು ಹೇಳಲಾಗುತ್ತಿರುವ ಜಾಮಿಯಾ ಮಸೀದಿಯಲ್ಲಿ ಪೂಜೆಗೆ ಅವಕಾಶ ನೀಡಬೇಕೆಂದು ಹಿಂದೂ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ. ಈ ಹಿನ್ನೆಲೆಯಲ್ಲಿ “ಮೂಲಮಂದಿರ ಚಲೋ” ಎನ್ನುವ ಅಭಿಯಾನವನ್ನು ಕೈಗೊಂಡಿವೆ. ಪಟ್ಟಣದ ಕುವೆಂಪು ವೃತ್ತದಿಂದ ಜಾಮಿಯಾ […]