ಮುಖ್ಯ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ: ಅರ್ಜಿ ಆಹ್ವಾನ
ಉಡುಪಿ, ಜೂನ್ 27: 2019-20 ನೇ ಸಾಲಿನ ಮುಖ್ಯ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ(ಸಿ.ಎಂ.ಇ.ಜಿ.ಪಿ)ಯಡಿ ಸ್ವ-ಉದ್ಯೋಗ ಸ್ಥಾಪಿಸಲು ಆಸಕ್ತಿ ಇರುವ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ/ ಯುವತಿಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯು ಕರ್ನಾಟಕ ಸರ್ಕಾರವು ಗ್ರಾಮೀಣ ಪ್ರದೇಶದಲ್ಲಿ ಸ್ವಂತ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಖಾದಿ & ಗ್ರಾಮೋದ್ಯೋಗ ಮಂಡಳಿ (ಕೆ.ವಿ.ಐ.ಬಿ) ಗಳ ಮುಖಾಂತರ ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯಲ್ಲಿ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ-ಯುವತಿಯರಿಗೆ ಗರಿಷ್ಠ ಯೋಜನಾ ವೆಚ್ಚ […]