ದೀಪಾವಳಿಗೆ ಭರ್ಜರಿ ಉಡುಗೊರೆ: 75,000 ಯುವಕರಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ಹಸ್ತಾಂತರಿಸಲಿರುವ ಪ್ರಧಾನಿ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶದಾದ್ಯಂತದ ಸುಮಾರು 75,000 ಯುವಕರು ಮತ್ತು ಅವರ ಕುಟುಂಬಗಳಿಗೆ ದೀಪಾವಳಿಯನ್ನು ವಿಶೇಷವಾಗಿಸಿದ್ದು, ಅಕ್ಟೋಬರ್ 22 ರಂದು ಯುವಕರಿಗೆ ಅವರ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಹಸ್ತಾಂತರಿಸಲಿದ್ದಾರೆ. ಪಟ್ಟಿ ಮಾಡಲಾದ ಯುವಕರಿಗೆ ಪ್ರಧಾನಿ ಮೋದಿ ವರ್ಚುವಲ್ ಕಾರ್ಯಕ್ರಮದ ಮೂಲಕ ನೇಮಕಾತಿ ಪತ್ರವನ್ನು ಹಸ್ತಾಂತರಿಸಲಿದ್ದಾರೆ. ಪ್ರಧಾನ ಮಂತ್ರಿಗಳ ಕಚೇರಿಯು ಎಲ್ಲಾ ಸಚಿವಾಲಯಗಳಿಗೆ ಆಯಾ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಪತ್ತೆಹಚ್ಚಲು ಮತ್ತು ನಿಗದಿತ ಸಮಯದಲ್ಲಿ ಭರ್ತಿ ಮಾಡಲು ಹೇಳಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. […]
ಕೇಂದ್ರ ಸರ್ಕಾರದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಉಡುಪಿ: ಕೇಂದ್ರ ಸರ್ಕಾರದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಅರ್ಹ ಅಭ್ಯರ್ಥಿಗಳು https://ssc.nic.in ಪೋರ್ಟಲ್ ನಲ್ಲಿ ಆನ್ ಲೈನ್ ಮೂಲಕ ಜೂನ್ 16 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಗತ್ಯವಾದ ಮಾರ್ಗದರ್ಶನವನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದ್ದು, ಅನುಮಾನಗಳಿದ್ದಲ್ಲಿ ಸಹಾಯವಾಣಿ 080- 25502520, 9483862020 ಅನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಮೊ.ನಂ. 9945856670, 8105618291 ಮತ್ತು 8197440155 ನ್ನು ಸಂಪರ್ಕಿಸುವಂತೆ […]