ನಗರಸಭಾ ವ್ಯಾಪ್ತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ದೀನ್ ದಯಾಳ್ ಉಪಾಧ್ಯಾಯ ಸ್ಮರಣ ಪಾರಿತೋಷಕ ವಿತರಣೆ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಪ್ರೌಢ ಶಾಲೆಗಳಲ್ಲಿ 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿಅತ್ಯಧಿಕ ಅಂಕ ಗಳಿಸಿರುವ ಪ್ರತಿಭಾನ್ವಿತ 3 ವಿದ್ಯಾರ್ಥಿಗಳಿಗೆ ಪಂಡಿತ್ ದೀನದಯಾಳ್ ಉಪಾಧ್ಯಾಯ ಸ್ಮರಣ ಪಾರಿತೋಷಕ, ಶಾಲಾ ಮಟ್ಟದಲ್ಲಿಅತ್ಯಧಿಕ ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಡಾ. ವಿ. ಎಸ್. ಆಚಾರ್ಯ ಸ್ಮರಣ ಪಾರಿತೋಷಕ ಮತ್ತು 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿಅತ್ಯಧಿಕ ಅಂಕಗಳಿಸಿರುವ ವಿದ್ಯಾರ್ಥಿನಿಗೆ ಕುಮಾರಿ ಗಾಯತ್ರಿ ಸ್ಮಾರಣ ಪಾರಿತೋಷಕ ವಿತರಣಾ ಸಮಾರಂಭವು, ಕೀರ್ತಿಶೇಷ ಡಾ. ವಿ. ಎಸ್. ಆಚಾರ್ಯ ಜನ್ಮ ದಿನವಾದ ಜುಲೈ 6 ಬುಧವಾರದಂದು […]
ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಹಿನ್ನೆಲೆ: ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿ
ಉಡುಪಿ: ಜೂನ್ 27 ರಿಂದ ಜುಲೈ 4 ರವರೆಗೆ ಜಿಲ್ಲೆಯ 7 ಪರೀಕ್ಷಾ ಕೇಂದ್ರಗಳಲ್ಲಿ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ 144(1) ರಂತೆ […]
ಹಿರಿಯಡ್ಕ: ನರೇಂದ್ರ ಮೋದಿ ಆಡಳಿತದ ಎಂಟನೇ ವರ್ಷಾಚರಣೆ ಪ್ರಯುಕ್ತ ‘ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ’ ಕಾರ್ಯಕ್ರಮ
ಉಡುಪಿ: ನರೇಂದ್ರ ಮೋದಿ ಆಡಳಿತದ ಎಂಟನೇ ವರ್ಷಾಚರಣೆ ಪ್ರಯುಕ್ತ ‘ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ’ ಕಾರ್ಯಕ್ರಮದಡಿ 80 ಬಡಗುಬೆಟ್ಟು ಹಾಗೂ ಹಿರಿಯಡ್ಕ ಮಹಾ ಶಕ್ತಿಕೇಂದ್ರ ಗಳ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಭಾನುವಾರ ಹಿರಿಯಡ್ಕದ ಗಣೇಶ ಕಲಾ ಮಂದಿರದಲ್ಲಿ ನಡೆಯಿತು. ಸೂರ್ಯಕಲಾ ಅಂಜಾರು ಮಠ ವಂದೇಮಾತರಂ ಗೀತೆ ಹಾಡಿ ಕಾರ್ಯಕ್ರಮ ಪ್ರಾರಂಭಿಸಿದರು. ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮೋದಿ ಸರಕಾರದ ಎಂಟು ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ […]
ವಿದ್ಯಾರ್ಥಿಗಳ ಸಾಧನೆಯೆ ವ್ಯಕ್ತಿಗಳ ಪ್ರಶ್ನೆಗಳಿಗೆ ಉತ್ತರವಾಗಬೇಕು: ರಘುಪತಿ ಭಟ್
ಉಡುಪಿ: ವಿದ್ಯಾರ್ಥಿಗಳು ಸತತ ಅಧ್ಯಯನಶೀಲರಾಗಬೇಕು, ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಬೇಕು, ಅವರ ಸಾಧನೆಯು ಎಲ್ಲ ವ್ಯಕ್ತಿಗಳ ಪ್ರಶ್ನೆಗಳಿಗೆ ಉತ್ತರವಾಗಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು. ಯಶಪಾಲ್ ಸುವರ್ಣ, ಸಾಪಲ್ಯ ಟ್ರಸ್ಟ್, ಆಭರಣ ಜ್ಯುವೆಲ್ಲರ್ಸ್, ಸಾಯಿರಾಂ ಟೆಕ್ಸ್ ಟೈಲ್ಸ್ ಗಳ ಪ್ರಾಯೋಜಕತ್ವದ ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆದ ಸಮಾರಂಭದಲ್ಲಿ ಸಾಧಕ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಅವರು ಮಾತನಾಡಿದರು. ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಲವು ಅಡೆತಡೆಗಳನ್ನು ಮೀರಿ ನಿಂತು, ಇಂದು ಖಾಸಗಿ ಶಾಲೆಗಳಿಗೆ […]
ದಿ. ಪಳ್ಳಿ ಗೋಕುಲ್ ದಾಸ್ ಸಂಸ್ಮರಣೆ ಪ್ರಯುಕ್ತ ಪ್ರತಿಭಾನ್ವಿತರ ಅಭಿನಂದನಾ ಕಾರ್ಯಕ್ರಮ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಐ.ಟಿ.ಡಿ.ಪಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕೊರಗ ಸಂಘಟನೆ ಉಡುಪಿ ಇವರ ಸಹಯೋಗದೊಂದಿಗೆ ‘ದಿ. ಪಳ್ಳಿ ಗೋಕುಲ್ ದಾಸ್ ಸಂಸ್ಮರಣೆ, 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ, ಮಕ್ಕಳ ಮಾನಸಿಕ ಆರೋಗ್ಯದ ಕುರಿತು ಆತ್ಮ ಸಮಾಲೋಚನೆ ಹಾಗೂ ಎಸ್.ಎಸ್.ಎಲ್.ಸಿ ನಂತರ ಮುಂದೇನು ಎಂಬ ವಿಷಯದ ಕುರಿತ ಮಾಹಿತಿ ಕಾರ್ಯಾಗಾರವು ಶನಿವಾರ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಸಕ ಕೆ. ರಘುಪತಿ ಭಟ್ […]