ವಿದ್ಯಾರ್ಥಿಗಳ ಸಾಧನೆಯೆ ವ್ಯಕ್ತಿಗಳ ಪ್ರಶ್ನೆಗಳಿಗೆ ಉತ್ತರವಾಗಬೇಕು: ರಘುಪತಿ ಭಟ್

ಉಡುಪಿ: ವಿದ್ಯಾರ್ಥಿಗಳು ಸತತ ಅಧ್ಯಯನಶೀಲರಾಗಬೇಕು, ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಬೇಕು, ಅವರ ಸಾಧನೆಯು ಎಲ್ಲ ವ್ಯಕ್ತಿಗಳ ಪ್ರಶ್ನೆಗಳಿಗೆ ಉತ್ತರವಾಗಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು. ಯಶಪಾಲ್ ಸುವರ್ಣ, ಸಾಪಲ್ಯ ಟ್ರಸ್ಟ್, ಆಭರಣ ಜ್ಯುವೆಲ್ಲರ್ಸ್, ಸಾಯಿರಾಂ ಟೆಕ್ಸ್ ಟೈಲ್ಸ್ ಗಳ ಪ್ರಾಯೋಜಕತ್ವದ ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆದ ಸಮಾರಂಭದಲ್ಲಿ ಸಾಧಕ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಅವರು ಮಾತನಾಡಿದರು. ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಲವು ಅಡೆತಡೆಗಳನ್ನು ಮೀರಿ ನಿಂತು, ಇಂದು ಖಾಸಗಿ ಶಾಲೆಗಳಿಗೆ […]

ದಿ. ಪಳ್ಳಿ ಗೋಕುಲ್ ದಾಸ್ ಸಂಸ್ಮರಣೆ ಪ್ರಯುಕ್ತ ಪ್ರತಿಭಾನ್ವಿತರ ಅಭಿನಂದನಾ ಕಾರ್ಯಕ್ರಮ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಐ.ಟಿ.ಡಿ.ಪಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕೊರಗ ಸಂಘಟನೆ ಉಡುಪಿ ಇವರ ಸಹಯೋಗದೊಂದಿಗೆ ‘ದಿ. ಪಳ್ಳಿ ಗೋಕುಲ್ ದಾಸ್ ಸಂಸ್ಮರಣೆ, 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ, ಮಕ್ಕಳ ಮಾನಸಿಕ ಆರೋಗ್ಯದ ಕುರಿತು ಆತ್ಮ ಸಮಾಲೋಚನೆ ಹಾಗೂ ಎಸ್.ಎಸ್.ಎಲ್.ಸಿ ನಂತರ ಮುಂದೇನು ಎಂಬ ವಿಷಯದ ಕುರಿತ ಮಾಹಿತಿ ಕಾರ್ಯಾಗಾರವು ಶನಿವಾರ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಸಕ ಕೆ. ರಘುಪತಿ ಭಟ್ […]

ದುಡಿಮೆಯೊಂದಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪೂರ್ಣಾಂಕ ಪಡೆದ ಪುನೀತ್ ಸಾಧನೆ ಶ್ಲಾಘನೀಯ: ಯಶ್ ಪಾಲ್ ಸುವರ್ಣ

ಮಲ್ಪೆ: ಮೀನುಗಾರಿಕಾ ಬಂದರಿನಲ್ಲಿ ಮುಂಜಾನೆ ಕೆಲಸಮಾಡಿ ಮಲ್ಪೆ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಗಳಿಸಿದ ಪುನೀತ್ ಸಾಧನೆ ಶ್ಲಾಘನೀಯ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಹೇಳಿದರು. ಮೀನು ಮಾರಾಟ ಫೆಡರೇಷನ್ ಹಂಗಾರಕಟ್ಟೆ ಶಾಖೆಯ ಬ್ಯಾಂಕಿಂಗ್ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಪುನೀತ್ ನ ಮುಂದಿನ ವಿದ್ಯಾಭ್ಯಾಸಕ್ಕಾಗಿ ಫೆಡರೇಶನ್ ವತಿಯಿಂದ […]

ಕೊಡವೂರು: ಮನೆ- ಮನೆಗೆ ತೆರಳಿ ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಕೆ

ಕೊಡವೂರು ವಾರ್ಡಿನಲ್ಲಿ ಮನೆ – ಮನೆಗೆ ತೆರಳಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಕಾರ್ಯ ಮೇ 20 ರಂದು ನಡೆಯಿತು. ಕೊಡವೂರು ವಾರ್ಡಿನಲ್ಲಿ ಅನೇಕ ಸಮಿತಿ ರಚನೆ ಮಾಡಲಾಗಿದ್ದು, ಅದರಲ್ಲಿ ವಿದ್ಯಾರ್ಥಿ ಸಮಿತಿಯೂ ಒಂದಾಗಿದೆ. ವಿದ್ಯಾರ್ಥಿ ಸಮಿತಿಯ ಮುಖಾಂತರ ಅನೇಕ ವಿದ್ಯಾರ್ಥಿಗಳಿಗೆ ಪುಸ್ತಕ, ಬ್ಯಾಗ್ ನೀಡಿ ಅವರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಕಾರ್ಯ ನಡೆಯುತ್ತಿದ್ದು, ಎಸೆಸೆಲ್ಸಿ ಪರೀಕ್ಷೆಯಲ್ಲಿ ಕೊಡವೂರು ವಾರ್ಡಿಗೆ ಹೆಸರು ತಂದಿರುವ ವಿದ್ಯಾರ್ಥಿಗಳ ಮನೆಗೆ ತೆರಳಿ ಅವರನ್ನು ಗೌರವಿಸುವ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ ನಗರ ಸಭಾ […]

ಮೇ-19 ಮಧ್ಯಾಹ್ನ 12.30ಕ್ಕೆ ಹತ್ತನೇ ತರಗತಿ ಫಲಿತಾಂಶ ಪ್ರಕಟ

ಬೆಂಗಳೂರು: ಮೇ-19 ರಂದು ಮಧ್ಯಾಹ್ನ 12.30ಕ್ಕೆ ಹತ್ತನೆ ತರಗತಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಬಗ್ಗೆ ಬುಧವಾರ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ‘ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಮತ್ತು ಶಾಲೆಗಳಲ್ಲಿ ಫಲಿತಾಂಶ ಲಭ್ಯವಿರಲಿದೆ. https://karresults.nic.in ಗೆ ಲಾಗಿನ್ ಆಗಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು’. ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ […]