ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾರೂ ಗೈರಾಗದಂತೆ ಕ್ರಮ: ಸಚಿವ ಸುರೇಶ್‌ಕುಮಾರ್

ಬೆಂಗಳೂರು: ಸಾರಿಗೆ ಸಮಸ್ಯೆಯಿಂದ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವ ವಿದ್ಯಾರ್ಥಿಗೂ ಗೈರಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯ ಹಿನ್ನೆಲೆಯಲ್ಲಿ ಸೋಮವಾರ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ  ಸಿಇಒಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು, ಡಿಡಿಪಿಐಗಳೊಂದಿಗೆ ವಿಡಿಯೊ ಸಂವಾದದಲ್ಲಿ ಪರೀಕ್ಷೆಗೆ ಕೈಗೊಂಡ ಸಿದ್ಧತೆಗಳನ್ನು ಅವರು ಪರಿಶೀಲಿಸಿದ್ದಾರೆ. ಮಳೆಗಾಲದಲ್ಲಿ ಕರಾವಳಿ, ಮಲೆನಾಡು, ಮುಂಬೈ ಕರ್ನಾಟಕ ಪ್ರದೇಶದ ದೂರದ ಸಂಪರ್ಕರಹಿತ ಪ್ರದೇಶಗಳು, ನೆರೆ  ರಾಜ್ಯದ  ಗಡಿಭಾಗದ ವಿದ್ಯಾರ್ಥಿಗಳು ಹಾಗೆಯೇ […]