ಎಸ್.ಎಸ್.ಎಲ್.ಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ 14,214 ವಿದ್ಯಾರ್ಥಿಗಳು

ಉಡುಪಿ : ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 14,214 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಮಾ. 21 ರಿಂದ ಏಪ್ರಿಲ್ 4 ರವರೆಗೆ ಪರೀಕ್ಷೆ ನಡೆಯಲಿದ್ದು, ಈ ಸಂಬಂಧ ಪೂರ್ವ ಸಿದ್ಧತಾ ಸಭೆ ಸೋಮವಾರ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಮಾಹಿತಿ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶೇಷಶಯನ, ಒಟ್ಟು  ಜಿಲ್ಲೆಯಲ್ಲಿ 51 ಪರೀಕ್ಷಾ ಕೇಂದ್ರಗಳಿದ್ದು, ಬೈಂದೂರು ವಲಯದ 8 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2092 […]