ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ: ಮಾರ್ಚ್ 28 ರಿಂದ ಏಪ್ರಿಲ್ 11ರ ವರೆಗೆ ಎಸ್.ಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡುವುದರೊಂದಿಗೆ ನಡೆಸಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ 266 ಶಾಲೆಗಳ 7229 ಬಾಲಕರು 6793 ಬಾಲಕಿಯರು ಸೇರಿದಂತೆ ಒಟ್ಟು 14022 ಜನ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆಯಲಿದ್ದು, ಅವರಲ್ಲಿ 13672 ಹೊಸದಾಗಿ, 298 ಜನ ಖಾಸಗಿ ವಿದ್ಯಾರ್ಥಿಗಳು […]