ಆಗಸ್ಟ್ 8 ರೊಳಗೆ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ: ಸಚಿವ ಸುರೇಶ್ ಕುಮಾರ್
ಕೊಳ್ಳೇಗಾಲ: ಎಸ್ಎಸ್ಎಲ್ ಸಿ ಪರೀಕ್ಷೆಯ ಆಗಸ್ಟ್ 8ರೊಳಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ‘ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಆಗಸ್ಟ್ 31ರ ವರೆಗೂ ಶಾಲೆಗಳನ್ನು ಆರಂಭಿಸುವುದಿಲ್ಲ. ಮುಂದಿನ ಪರಿಸ್ಥಿತಿ ನೋಡಿಕೊಂಡು ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.