ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ಪರೀಕ್ಷೆ ವೇಳಾಪಟ್ಟಿ ಪ್ರಕಟ: ಜೂ. 25ರಿಂದ ಪರೀಕ್ಷೆ ಆರಂಭ
ಉಡುಪಿ: ಕರ್ನಾಟಕ ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕೊನೆಗೂ ಡೇಟ್ ಫಿಕ್ಸ್ ಆಗಿದೆ. ಜೂ. 25 ರಿನಂದ ಜು. 4 ವರೆಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಹೆಚ್ಚುವರಿ ಕೇಂದ್ರಗಳನ್ನು ಆಯ್ಕೆ ಮಾಡಲಾಗಿದ್ದು, 2879 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಜೂನ್ 18 ರಂದು ಬಾಕಿ ಉಳಿದ ‘ದ್ವಿತೀಯ ಪಿಯುಸಿ’ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.