ಆಗಸ್ಟ್ 10ಕ್ಕೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟ
ಬೆಂಗಳೂರು: 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಸೋಮವಾರ (ಆಗಸ್ಟ್ 10) ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಮ್ಮ ಫೇಸ್ ಬುಕ್ ನಲ್ಲಿ ತಿಳಿಸಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ಪ್ರೌಢಶಾಲಾ ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಫಲಿತಾಂಶ ಬರಲಿದೆ.