7-9ನೇ ತರಗತಿಗೆ ಪರೀಕ್ಷೆ ಇಲ್ಲ: ಎಸ್ಸೆಸ್ಸೆಲ್ಸಿ- ಪಿಯುಸಿ ಪರೀಕ್ಷೆ ಬಗ್ಗೆ ಏ.14ರ ನಂತರ ನಿರ್ಧಾರ: ಸಚಿವರಿಂದ ಸ್ಪಷ್ಟನೆ
ಬೆಂಗಳೂರು: ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರದ ಆದೇಶದಂತೆ ದೇಶಾದ್ಯಂತ ಲಾಕ್‍ಡೌನ್ ಮಾಡಲಾಗಿದ್ದು. ವಿದ್ಯಾರ್ಥಿಗಳ ಪರೀಕ್ಷೆಗಳೂ ಮುಂದೂಡಲ್ಪಟ್ಟಿದ್ದು 7-9ನೇ ತರಗತಿಗೆ ಪರೀಕ್ಷೆಗಳು ನಡೆಯುವುದಿಲ್ಲ, ಎಸ್ಸೆಸ್ಸೆಲ್ಸಿ- ಪಿಯುಸಿ ಪರೀಕ್ಷೆ ಬಗ್ಗೆ ಏ. 14ರ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಫೇಸ್‍ಬುಕ್ ಲೈವ್ ವಿಡಿಯೋ ಮೂಲಕ ಸ್ಪಷ್ಟಣೆ ನೀಡಿದ್ದಾರೆ. 7 ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಮುಂದಿನ ತರಗತಿಗೆ ಪಾಸ್ ಮಾಡಿ ಕಳುಹಿಸಲಾಗುತ್ತದೆ ಎಂದು ತಿಳಿಸಿದರು. […]