ಬಿಜೆಪಿಗೆ ಮತ ನೀಡಿದ್ದೇ sslcಯಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಸ್ಥಾನ ಕುಸಿಯಲು ಕಾರಣ: ಸಚಿವ ರೇವಣ್ಣ
ಹಾಸನ: ಉಡುಪಿ- ದಕ್ಷಿಣ ಕನ್ನಡದವರು ಬಿಜೆಪಿಯವರಿಗೆ ಮತಹಾಕಿದ್ದಾರೆ. ಇದಕ್ಕಾಗಿ ಅವರ ಸ್ಥಾನ ಕುಸಿದಿದೆ. ಜಾತ್ಯತೀತರಿಗೆ ಅವರು ವೋಟ್ ಹಾಕಿದ್ದರೆ ಮೊದಲನೆಯ ಸ್ಥಾನ ಬರುತ್ತಿತ್ತು. ಅವರು ಶಿಕ್ಷಣಕ್ಕೆ ಒತ್ತು ನೀಡುತ್ತಿಲ್ಲ ಎನ್ನುವುದಕ್ಕೆ ಇದೇ ಉದಾಹರಣೆ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ವಿವಾದದ ಕಿಡಿ ಹೊತ್ತಿಸಿದ್ದಾರೆ. ಪ್ರತಿ ಬಾರಿ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಮೊದಲ ಅಥವಾ ಎರಡನೆಯ ಸ್ಥಾನ ಪಡೆದುಕೊಳ್ಳುತ್ತಿದ್ದ ಉಡುಪಿ ಜಿಲ್ಲೆಯು ಈ ಬಾರಿ ಐದನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ವ್ಯಂಗ್ಯವಾಡಿದ್ದಾರೆ. ಹಾಸನ ಜಿಲ್ಲೆಯು ಎಸ್ ಎಸ್ ಎಲ್ […]
ನಾಳೆ ಎಸೆಸ್ಸೆಲ್ಸಿ ಫಲಿತಾಂಶ ಪ್ರಕಟ
ಎಸೆಸ್ಸೆಲ್ಸಿ ಫಲಿತಾಂಶ ನಾಳೆ ಬೆಳಗ್ಗೆ ಪ್ರಕಟವಾಗಲಿದೆ. ಬೆಳಗ್ಗೆ ಸುಮಾರು 11.30 ರ ವೇಳೆಗೆ ಪ್ರೌಢಶಿಕ್ಷಣ ಮಂಡಳಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಘೋಷಿಸಲಿದೆ. ಜಿಲ್ಲಾವಾರು, ಹಾಗೂ ಅತೀ ಹೆಚ್ಚು ಅಂಕ ಪಡೆದವರ ಮಾಹಿತಿ ಸುದ್ದಿಗೋಷ್ಟಿಯಲ್ಲಿ ಸಿಗಲಿದೆ. http://www.karresults.nic.in/ನಲ್ಲಿ ಫಲಿತಾಂಶ ಪಡೆಯಬಹುದು.
ಎಸ್.ಎಸ್.ಎಲ್.ಸಿ ಪರೀಕ್ಷೆ: 172 ಮಂದಿ ಗೈರು
ಉಡುಪಿ: ಜಿಲ್ಲೆಯಲ್ಲಿ ಗುರುವಾರ ನಡೆದ ಎಸ್‍ಎಸ್‍ಎಲ್‍ಸಿ ತೃತೀಯ ಭಾಷೆ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಒಟ್ಟು 13314 ಮಂದಿ ಪರೀಕ್ಷೆ ಬರೆದಿದ್ದಾರೆ. ಜಿಲ್ಲೆಯಲ್ಲಿ ಪರೀಕ್ಷೆಗೆ ಒಟ್ಟು 13486 ಮಂದಿ ನೊಂದಾಯಿಸಿದ್ದು, ಇದರಲ್ಲಿ 172 ಮಂದಿ ಗೈರು ಹಾಜರಾಗಿದ್ದಾರೆ. ಪರೀಕ್ಷೆಗೆ ನೊಂದಾಯಿಸಿದ ರೆಗ್ಯುಲರ್ ಮತ್ತು ರೆಗ್ಯುಲರ್ ಪುನರಾವರ್ತಿತ 12956 ಮಂದಿ ವಿದ್ಯಾರ್ಥಿಗಳಲ್ಲಿ 123 ಮಂದಿ ಗೈರು ಹಾಜರಾಗಿದ್ದು, 12833 ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ. 423 ಮಂದಿ ಖಾಸಗಿಯಾಗಿ ಪರೀಕ್ಷೆಗೆ ನೊಂದಾಯಿಸಿದ್ದ ಅಭ್ಯರ್ಥಿಗಳಲ್ಲಿ 49 ಮಂದಿ ಗೈರು ಹಾಜರಾಗಿದ್ದು, 374 ಮಂದಿ […]
ಎಸ್‍ಎಸ್‍ಎಲ್‍ಸಿ ಪರೀಕ್ಷೆ: ನಿಗಮದ ಬಸ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ
ಉಡುಪಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಮಾರ್ಚ್ 21 ರಿಂದ ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಕ.ರಾ.ರ.ಸಾ. ನಿಗಮವು, ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯುವ ದಿನಗಳಲ್ಲಿ ಅಂದರೆ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಪರೀಕ್ಷೆಗೆ ಹಾಜರಾಗುವ, ನಿಗಮದ ವತಿಯಿಂದ ವಿತರಿಸಿರುವ ವಿದ್ಯಾರ್ಥಿ ರಿಯಾಯಿತಿ ಬಸ್‍ಪಾಸ್ ಹೊಂದಿರುವ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ವಾಸಸ್ಥಳಕ್ಕೆ ಹಿಂದಿರುಗುವಾಗ ಬಸ್ ಪಾಸ್ ಹಾಗು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ […]
ಎಸ್.ಎಸ್.ಎಲ್.ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ
ಉಡುಪಿ: ಉಡುಪಿ ಜಿಲ್ಲೆಯ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯು ನಡೆಯಲಿದ್ದು, ಪರೀಕ್ಷೆಯು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಮತ್ತು ಕಿಡಿಗೇಡಿಗಳು ಪರೀಕ್ಷಾ ಕೇಂದ್ರದ ಪರಿಸರವನ್ನು ಕಲುಷಿತಗೊಳಿಸದಂತೆ ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷೆಗಳು ನಡೆಯುವ ದಿನಗಳಂದು ಬೆಳಗ್ಗೆ 8 ರಿಂದ ರಾತ್ರಿ 6 ರ ವರೆಗೆ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲೂ ಹಾಗೂ ಸುತ್ತಲೂ […]