ಎಸೆಸ್ಸೆಲ್ಸಿ ಫಲಿತಾಂಶ: ಒಬ್ಬ ವಿದ್ಯಾರ್ಥಿ ಹೊರತು ಪಡಿಸಿ ಎಲ್ಲರೂ ಪಾಸ್
ಬೆಂಗಳೂರು: ಕೋವಿಡ್ ಕಾರಣದಿಂದ ಈ ಸಲ ವಿಶೇಷವಾಗಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಕಳೆದ ಮೂರು ವಾರಗಳ ಹಿಂದೆ ನಡೆದ ಸರಳ ಮಾದರಿಯ ಪರೀಕ್ಷೆ ಫಲಿತಾಂಶವನ್ನು ಇಂದು ನೂತನ ಶಿಕ್ಷಣ ಸಚಿವರಾಗಿರುವ ಬಿಸಿ ನಾಗೇಶ್ ಪ್ರಕಟಿಸಿದರು. ಕೋವಿಡ್ ಸಮಯದಲ್ಲಿ ಪರೀಕ್ಷೆ ಬರೆದ ಎಲ್ಲರನ್ನೂ ಪಾಸ್ ಮಾಡುವುದಾಗಿ ಮೊದಲೇ ಈ ಹಿಂದಿನ ಶಿಕ್ಷಣ ಸಚಿವರು ಭರವಸೆ ನೀಡಿದ್ದ ಅವರು, ಅದರಂತೆ, ಒಬ್ಬ ವಿದ್ಯಾರ್ಥಿ ಹೊರತು ಪಡಿಸಿ ಎಲ್ಲರನ್ನು ಪಾಸ್ ಮಾಡಲಾಗಿದೆ ಎಂದರು. ಶೇ. 99.9 ಪಾಸ್ ಆಗಿದ್ದಾರೆ. […]