ಮಂಗಳೂರು: ಸ೦ತ ಅಲೋಶಿಯಸ್‌ ಸ್ವಾಯತ್ತ ಕಾಲೇಜಿಗೆ ಪರಿಗಣಿತ ವಿಶ್ವವಿದ್ಯಾನಿಲಯ ಸ್ಥಾನಮಾನ

ಮಂಗಳೂರು: ಕೇಂದ್ರ ಸರಕಾರದ ಶಿಕ್ಷಣ ಸಚಿವಾಲಯದ ಜನವರಿ 25-2024 ರ ಅಧಿಸೂಚನೆ ಸಂಖ್ಯೆ 9-27/2017-0,3 (1) ಪ್ರಕಾರ ಮಂಗಳೂರಿನ ಸಂತ ಅಲೋಶಿಯಸ್‌ ಸ್ವಾಯತ್ತ ಕಾಲೇಜನ್ನು ಪರಿಗಣಿತ ವಿಶ್ವವಿದ್ಯಾನಿಲಯವೆಂದು ಘೋಷಿಸಲಾಗಿದೆ ಎಂದು ಕಾಲೇಜಿನ ಪ್ರಾಶುಂಪಾಲ ಡಾ. ಪ್ರವೀಣ್‌ ಮಾರ್ಟಿಸ್‌ ಎಸ್‌.ಜೆ ತಿಳಿಸಿದ್ದಾರೆ. ಮಂಗಳೂರಿನ ಪ್ರಸಿದ್ದ ಸ೦ತ ಅಲೋಶಿಯಸ್‌ ಕಾಲೇಜಿನ (ಸ್ವಾಯತ್ತ) ವಿಶ್ವವಿದ್ಯಾನಿಲಯದ ಸ್ಥಾನಮಾನದ ಪ್ರಸ್ತಾವನೆಯನ್ನು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಮತ್ತು ಭಾರತ ಸರ್ಕಾರದ ಶಿಕ್ಷಣ ಸಚಿವಾಲಯವು ಅನುಮೋದಿಸಿದೆ ಮತ್ತು ಪರಿಗಣಿತ ವಿಶ್ವವಿದ್ಯಾನಿಲಯದ ಸ್ಥಾನಮಾನವನ್ನು ನೀಡಿದೆ. ಈ ಸ್ಥಾನಮಾನದೊಂದಿಗೆ […]