ಬೆಂಗಳೂರಿನ ಸೇಂಟ್ ಮಾರ್ಥಾಸ್ ಆಸ್ಪತ್ರೆ ಮೇಲ್ಛಾವಣಿ ಕುಸಿತ: ಮೂವರು ಕಾರ್ಮಿಕರು ಗಾಯಾಳು; ಒಬ್ಬನ ಸ್ಥಿತಿ ಗಂಭೀರ

ಬೆಂಗಳೂರು: ಮಂಗಳವಾರ ಬೆಳಗ್ಗೆ 6:30ರ ಸುಮಾರಿಗೆ ನೃಪತುಂಗ ರಸ್ತೆಯಲ್ಲಿರುವ ಸೇಂಟ್ ಮಾರ್ಥಾಸ್ ಆಸ್ಪತ್ರೆಯಲ್ಲಿ ನಿರ್ಮಾಣ ಹಂತದಲ್ಲಿರುವ ಪೋರ್ಟಿಕೋದ ಮೇಲ್ಛಾವಣಿ ಕುಸಿದು ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕನೊಬ್ಬನ ಸ್ಥಿತಿ ಗಂಭೀರವಾಗಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ. ಆತನ ಜೊತೆ ಕೆಲಸ ಮಾಡುತ್ತಿದ್ದ ಮೂವರು ಸಹೋದ್ಯೋಗಿಗಳಿಗೆ ಗಾಯಗಳಾಗಿವೆ. ತೀವ್ರವಾಗಿ ಗಾಯಗೊಂಡಿರುವ ಕಾರ್ಮಿಕನನ್ನು ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ನಿಗಾವಣೆಯಲ್ಲಿರಿಸಿದ್ದು, ಇತರ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪೋರ್ಟಿಕೋದ ನಿರ್ಮಾಣವು ಎರಡು ತಿಂಗಳ ಹಿಂದೆ ಪ್ರಾರಂಭವಾಗಿತ್ತು ಮತ್ತು ಇದು ಒಂದು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಸೇಂಟ್ ಮಾರ್ಥಾಸ್ […]