ಇಂದಿನಿಂದ ಮರಳುನಾಡಿನಲ್ಲಿ ಐಪಿಎಲ್ ಜಾತ್ರೆ ಶುರು: ಉದ್ಘಾಟನಾ ಪಂದ್ಯದಲ್ಲಿ ಮುಂಬೈ- ಚೆನ್ನೈ ತಂಡಗಳ ಸೆಣಸಾಟ

ಅಬುಧಾಬಿ: ಕೊರೊನಾ ಆತಂಕ, ಅಡೆತಡೆಗಳ ನಡುವೆಯೇ ಕ್ರಿಕೆಟ್ ಪ್ರೇಮಿಗಳಿಗೆ ರಸದೌತಣ ಉಣಬಡಿಸಲು ಇಂಡಿಯನ್ ಪ್ರೀಮಿಯರ್‌ ಲೀಗ್‌ ಟಿ20 (ಐಪಿಎಲ್ ) ಕ್ರಿಕೆಟ್ ಟೂರ್ನಿ ಇಂದಿನಿಂದ ಶುರುವಾಗಲಿದೆ. ಅಬುಧಾಬಿಯ ಅಲ್‌ ಝಯೀದ್ ಕ್ರೀಡಾಂಗಣದಲ್ಲಿ ನಡೆಯುವ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ಮತ್ತು ಚೆನ್ನೈ ಸೂಪರ್ ಕಿಂಗ್ಸ್‌ ತಂಡಗಳು ಮುಖಾಮುಖಿಯಾಗಲಿವೆ. ಇದರೊಂದಿಗೆ 53 ದಿನಗಳ ಐಪಿಎಲ್‌ ಕ್ರಿಕೆಟ್ ಜಾತ್ರೆಗೆ ಚಾಲನೆ ದೊರೆಯಲಿದೆ. ಪ್ರೇಕ್ಷಕರಿಲ್ಲದ ಜಾತ್ರೆ: ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ಐಪಿಎಲ್ ಪಂದ್ಯಗಳಿಗೆ ಜನರನ್ನು ನಿರ್ಬಂಧಿಸಲಾಗಿದ್ದು, […]