ರಾಜ್ಯ ಬಜೆಟ್ ನಲ್ಲಿ ಮದ್ಯ ಮಾರಾಟ ಸನ್ನದುದಾರರ ಬೇಡಿಕೆ ಈಡೇರಿಸುವಂತೆ ಮನವಿ

ಉಡುಪಿ: 2025-26ನೇ ರಾಜ್ಯ ಬಜೆಟ್‌ನಲ್ಲಿ ರಾಜ್ಯದ ಎಲ್ಲ ವರ್ಗದ ಮದ್ಯ ಮಾರಾಟ ಸನ್ನದುದಾರರ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ವತಿಯಿಂದ ಸೋಮವಾರ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಹಾಗೂ ಸಚಿವರು ಮತ್ತು ಉನ್ನತ ಅಧಿಕಾರಿಗಳಿಗೆ ಸಲ್ಲಿಸಲಾಯಿತು. ಅಸೋಸಿಯೇಶನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಗೋವಿಂದರಾಜ್ ಹೆಗ್ಡೆ ಮಾತನಾಡಿ, ಚಿಲ್ಲರೆ ಮದ್ಯ ಮಾರಾಟದ ಮೇಲೆ ಕನಿಷ್ಟ ಶೇ.20 ಲಾಭಾಂಶ ನೀಡಬೇಕು. ಹೆಚ್ಚುವರಿ ಅಬಕಾರಿ ಶುಲ್ಕವನ್ನು ಕಡಿಮೆ ಮಾಡಬೇಕು. ಯಾವುದೇ […]