ರಾಜ್ಯ ಕಾಂಗ್ರೆಸ್ ಸರಕಾರ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಮಟ್ಟಹಾಕಲು ಪ್ರಯತ್ನಿಸುತ್ತಿದೆ: ಸಂಸದ ಕೋಟ ಆರೋಪ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಿಂದುತ್ವಕ್ಕಾಗಿ ಕೆಲಸ ಮಾಡಿದವರನ್ನು ಗಡಿಪಾರು ಮಾಡುವ ಹಾಗೂ ಎಫ್‌ಐಆರ್ ದಾಖಲಿಸುವ ಪ್ರಯತ್ನವನ್ನು ಮಾಡುತ್ತಿದೆ. ಸಿದ್ಧರಾಮಯ್ಯ ಸರಕಾರದ ನಿರ್ದೇಶನದ ಮೇರೆಗೆ ಪೊಲೀಸರು ಈ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಭಾವನೆ ವ್ಯಕ್ತಪಡಿಸಿದ, ಕಾರ್ಯಕ್ರಮಗಳಲ್ಲಿ ಭಾಷಣ ಮಾಡಿದ ಹಿಂದೂ ಸಂಘಟನೆಗಳ ಪ್ರಮುಖರಿಗೆ ನೋಟೀಸ್ ನೀಡುವ ಮೂಲಕ […]