ರಾಜ್ಯದಲ್ಲಿ ಇಂದು ಒಂದೇ ದಿನ 216 ಕೊರೊನಾ ಸೋಂಕಿತರು ಪತ್ತೆ: ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 1959ಕ್ಕೇರಿಕೆ

ಉಡುಪಿ: ರಾಜ್ಯದಲ್ಲಿ ಇಂದು ಹೊಸದಾಗಿ 216 ಜನ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 1959ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಬೆಳಿಗ್ಗಿನ ಬುಲೆಟಿನ್ ನಲ್ಲಿ 196 ಸೋಂಕಿತರು ಹಾಗೂ ಸಂಜೆಯ ಬುಲೆಟಿನ್ ನಲ್ಲಿ 20 ಸೋಂಕಿತರು ಪತ್ತೆಯಾಗಿದ್ದು, ಒಂದೇ ದಿನ ಒಟ್ಟು 216 ಜನರಲ್ಲಿ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ನೀಡಿದೆ.