ರಾಜ್ಯ ಸರ್ಕಾರ ಮರಾಠ ಅಭಿವೃದ್ದಿ ಪ್ರಾಧಿಕಾರ ಘೋಷಿಸಿ ಕನ್ನಡಿಗರನ್ನು ಕೆರಳಿಸುವ ಕೆಲಸ ಮಾಡುತ್ತಿದೆ: ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು: ಗಡಿಭಾಗದಲ್ಲಿ ಕನ್ನಡ ಮತ್ತು ಮರಾಠಿಗರ ನಡುವೆ ಆಗಾಗ ಸಂಘರ್ಷ ನಡೆದರೂ, ರಾಜ್ಯಾದ್ಯಂತ ಎರಡೂ ಸಮುದಾಯಗಳ ಜನರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಮರಾಠ ಅಭಿವೃದ್ದಿ ಪ್ರಾಧಿಕಾರ ಘೋಷಿಸಿ ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸುವ ಮೂರ್ಖತನ ಕೆಲಸಕ್ಕೆ ಕೈಹಾಕಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, ಯಾವುದೇ ವೈಜ್ಞಾನಿಕ ಅಧ್ಯಯನಗಳಿಲ್ಲದೆ ಜಾತಿ ಆಧಾರಿತ ನಿಗಮ-ಪ್ರಾಧಿಕಾರ ಸ್ಥಾಪನೆ ಸಮಾಜ ವಿರೋಧಿ ಮಾತ್ರವಲ್ಲ, ಪ್ರಜಾಪ್ರಭುತ್ವ ವಿರೋಧಿ ತೀರ್ಮಾನ ಎಂದು […]