ಬಡವರ ಅನ್ನಕ್ಕೂ ವಿಷ ಹಾಕಿದ ರಾಜ್ಯ ಸರಕಾರ; ದೀಪಕ್ ಕೋಟ್ಯಾನ್ ಆರೋಪ

ಉಡುಪಿ: ಬೆಳ್ಮಣ್‌ ನ್ಯಾಯಬೆಲೆ ಅಂಗಡಿಯಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ವಿತರಣೆಯಾದ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದ್ದು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಗ್ರಾಮದ ಗ್ರಾಹಕರು ಮನೆಗೆ ಪಡಿತರ ತೆಗೆದುಕೊಂಡು ಹೋದ ಅಕ್ಕಿಯನ್ನು ನೀರಿನಲ್ಲಿ ಹಾಕಿ ತೊಳೆಯುತ್ತಿದ್ದಾಗ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ. ಕೂಡಲೇ ಅಧಿಕಾರಿಗಳಿಗೆ ಹಾಗೂ ಸ್ಥಳೀಯ ಪಂಚಾಯಿತಿಗೆ ಮಾಹಿತಿ ನೀಡಿದ್ದಾರೆ. ಸರ್ಕಾರದ ಆಹಾರ ಇಲಾಖೆ ಮೂಲಕ ವಿತರಣೆ ಆಗುವ ಅಕ್ಕಿ ಬಹಳಷ್ಟು ಸಲ ಕಲಬೆರಕೆಯಿಂದ ಕೂಡಿರುವುದು ರಾಜ್ಯದ ಅಲ್ಲಾಲ್ಲಿ […]