ಕಾರ್ಮಿಕ ದಿನಾಚರಣೆ ಉಡುಗೊರೆ: ಕೆಎಸ್‌ಆರ್‌ಟಿಸಿಯ 7,200 ನೌಕರರ ವಿರುದ್ಧದ ಶಿಸ್ತು ಪ್ರಕರಣ ರದ್ದು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಕಾರ್ಮಿಕ ದಿನದಂದು ತನ್ನ ಕಾರ್ಮಿಕರಿಗೆ ಉಡುಗೊರೆಯನ್ನು ನೀಡಿದೆ. ಸಂಸ್ಥೆಯ 7,200 ನೌಕರರ ವಿರುದ್ಧ ದಾಖಲಾಗಿದ್ದ ಶಿಸ್ತು ಪ್ರಕರಣಗಳನ್ನು ಒಂದೇ ಬಾರಿಗೆ ಅನ್ವಯಿಸುವಂತೆ ರದ್ದು ಮಾಡಿ ಆದೇಶ ಹೊರಡಿಸಿ ಇತಿಹಾಸ ನಿರ್ಮಿಸಿದೆ. ಕೆಎಸ್‌ಆರ್‌ಟಿಸಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಕಾರ್ಮಿಕ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬು ಕುಮಾರ್ ಈ ಆದೇಶವನ್ನು ಹೊರಡಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. 10 ತಿಂಗಳಿಗಿಂತ ಕಡಿಮೆ ಅವಧಿಯ ಒಳಗಿನ ಗೈರು ಹಾಜರಿಯನ್ನು […]