ರಾಜ್ಯದಲ್ಲಿ ಒಳನಾಡು ಜಲ ಸಂಪನ್ಮೂಲಗಳನ್ನು ಬಳಸಿಕೊಂಡು ಮೀನುಗಾರಿಕೆ: ಸಚಿವ ಕೋಟ ಸಭೆ
ಬೆಂಗಳೂರು: ರಾಜ್ಯದಲ್ಲಿ ಮೀನುಗಾರಿಕೆ ಒಂದು ಪ್ರಮುಖ ಉದ್ಯಮವಾಗಿ ಬೆಳೆಯಲು ಒಳನಾಡು ಜಲ ಸಂಪನ್ಮೂಲಗಳನ್ನು ಬಳಸಿಕೊಂಡು ಮೀನುಗಾರಿಕೆ ಮತ್ತು ಜಲಕೃಷಿಯ ಅಭಿವೃದ್ಧಿಯ ಕುರಿತು ನೀಲನಕ್ಷೆ ತಯಾರಿಸಲು ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ವಿಕಾಸಸೌಧದಲ್ಲಿ ಪರಿಣಿತರ ಸಭೆ ನಡೆಸಿದರು. ಮೀನುಗಾರರ ಕಲ್ಯಾಣಕ್ಕಾಗಿ 1957 ರಲ್ಲಿ ಸ್ಥಾಪನೆಯಾದ ಮೀನುಗಾರಿಕೆ ಇಲಾಖೆ 1993ರಲ್ಲಿ ತಂದ ಪೂರಕ ಕಾಯ್ದೆ, 2003ರಲ್ಲಿ ತಂದಿರುವ ತಿದ್ದುಪಡಿಗಳು ಸಂಬಂಧಿಸಿದಂತೆ ಸೂಕ್ತ ನಿಯಮಗಳು ರೂಪಿಸಲಾಗದಿರುವ ಕುರಿತು ಸುದೀರ್ಘ ಚರ್ಚೆ […]