ಮಕ್ಕಳಿಗೆ ಎಳೆವೆಯಲ್ಲೆ ಕ್ರೀಡೆಯ ಬಗ್ಗೆ ಪ್ರೋತ್ಸಾಹ ನೀಡಬೇಕು: ಶೋಭಾ ಕರಂದ್ಲಾಜೆ
ಉಡುಪಿ: ಮಕ್ಕಳಿಗೆ ಎಳವೆಯಲ್ಲಿಯೇ ಕ್ರೀಡೆಯ ಬಗ್ಗೆ ಸರಿಯಾದ ಪ್ರೋತ್ಸಾಹ ಹಾಗೂ ತರಬೇತಿ ನೀಡಿದರೆ, ಮುಂದೆ ಅವರು ದೇಶವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಲು ಸಾಧ್ಯವಾಗುತ್ತದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಜಿ.ಪಂ. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ, ಜಿಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಅಜ್ಜರಕಾಡಿನ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಎರಡು ದಿನಗಳ ಪ್ರಾಥಮಿಕ ಹಾಗೂ -ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ರಾಜ್ಯಮಟ್ಟದ ಬ್ಯಾಡ್ಮಿಂಟನ್ […]