ರಾಜ್ಯಮಟ್ಟದ ಪವರ್ ಲಿಫ್ಟಿಂಗ್: ಸತೀಶ್ ಖಾರ್ವಿಗೆ ಚಿನ್ನದ ಪದಕ
ಕುಂದಾಪುರ: ಸಾಲಿಗ್ರಾಮದಲ್ಲಿ ಇಂದು ನಡೆದ ರಾಜ್ಯಮಟ್ಟದ ಪುರುಷರ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಒಟ್ಟು 540 ಕೆಜಿ ಭಾರವನ್ನು ಎತ್ತುವ ಮೂಲಕ ಕುಂದಾಪುರ ಹರ್ಕ್ಯುಲೆಸ್ ಜಿಮ್ ನ ವ್ಯವಸ್ಥಾಪಕ ಸತೀಶ್ ಖಾರ್ವಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಆ ಮೂಲಕ ಮಹಾರಾಷ್ಟ್ರದಲ್ಲಿ ನಡೆಯುವ ರಾಷ್ಟ್ರೀಯ ಪವರ್ ಲಿಫ್ಟಿಂಗ್ ಸ್ಪರ್ಧೆಗೆ ಕರ್ನಾಟಕದ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ.