ನ.15ಕ್ಕೆ ಉಡುಪಿಯಲ್ಲಿ 68ನೇ ಅಖಿಲ ಭಾರತ ಸಹಕಾರ ಸಪ್ತಾಹದ ಎರಡನೇ ದಿನದ ರಾಜ್ಯಮಟ್ಟದ ಕಾರ್ಯಕ್ರಮ: ರಾಜೇಂದ್ರ ಕುಮಾರ್
ಉಡುಪಿ: 68ನೇ ಅಖಿಲ ಭಾರತ ಸಹಕಾರ ಸಪ್ತಾಹದ ಎರಡನೇ ದಿನದ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ನ.15ರಂದು ಉಡುಪಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ. ನಗರದ ಹೋಟೆಲ್ ಡಯಾನ ಸಭಾಂಗಣದಲ್ಲಿ ಏರ್ಪಡಿಸಲಾದ ಈ ಕುರಿತ ಪೂರ್ವ ಭಾವಿ ಸಭೆಯ ಬಳಿಕ ಮಾತನಾಡಿದ ಅವರು, ಅವಿಭಜಿತ ದ.ಕ. ಜಿಲ್ಲೆಗಳ ಎಲ್ಲ ಸಹಕಾರಿಗಳ ನೇತೃತ್ವದಲ್ಲಿ ಈ ಕಾರ್ಯ ನಡೆಯಲಿದ್ದು, ಸುಮಾರು 10ಸಾವಿರ ಮಂದಿ ಸೇರುವ ನಿರೀಕ್ಷೆ ಹೊಂದಿದ್ದೇವೆ. ಇದಕ್ಕೆ […]