ಡಿ.8,9 ಮತ್ತು 10 ರಂದು ಎಕ್ಸಲೆಂಟ್ ಕಾಲೇಜಿನಲ್ಲಿ ಪ.ಪೂ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ
ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ, ಎಕ್ಸಲೆಂಟ್ ಪದವಿಪೂರ್ವ ಕಾಲೇಜು ಸುಣ್ಣಾರಿ ಹಾಗೂ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ ಡಿ.8,9 ಮತ್ತು 10 ರಂದು ಸುಣ್ಣಾರಿಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ತಿಳಿಸಿದ್ದಾರೆ.