ರಾಜ್ಯದಲ್ಲಿ ಮುಂಗಾರಿನ ಪ್ರಭಾವ . ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾರ್ಭಟ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ.ರಾಜ್ಯದಲ್ಲಿ ದುರ್ಬಲಗೊಂಡಿದ್ದ ಮುಂಗಾರು ಮತ್ತೆ ಚುರುಕುಗೊಂಡಿದೆ. ಬೆಂಗಳೂರು ನಗರ ಸೇರಿದಂತೆ ಕೆಲವೆಡೆ ಜಡಿ ಮಳೆ ಆರಂಭವಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತವರಣವಿತ್ತು. ನಂತರ ಜೋರು ಮಳೆ ಆರಂಭವಾಗಿದೆ. ಅದೇ ರೀತಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚನ್ನಪಟ್ಟಣದ ಮತ್ತಿತರ ಕಡೆ ಮಳೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು, ಕೋಲಾರ, ಶ್ರೀನಿವಾಸಪುರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಕಡೆ ರಾತ್ರಿಯಿಂದಲೇ ಜಿಟಿ […]