ರಾಜ್ಯ ಸಾರಿಗೆ ನೌಕರರ ಮುಷ್ಕರ ಕೊನೆಗೂ ಅಂತ್ಯ: ಇಂದು ಸಂಜೆಯಿಂದಲೇ ಬಸ್ ಸಂಚಾರ ಆರಂಭ

ಬೆಂಗಳೂರು: ರಾಜ್ಯದಲ್ಲಿ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಸಾರಿಗೆ ಸಿಬ್ಬಂದಿ ಮುಷ್ಕರ ಕೊನೆಗೂ ಅಂತ್ಯವಾಗಿದೆ. ಆ ಮೂಲಕ ಸಾರ್ವಜನಿಕರ ಸಂಕಷ್ಟ, ಪರದಾಟಕ್ಕೆ ತೆರೆಬಿದ್ದಿದೆ. ಸಾರಿಗೆ ಸಿಬ್ಬಂದಿ ಮುಷ್ಕರವನ್ನು ವಾಪಸ್ ಪಡೆಯುತ್ತಿದ್ದೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಅವರು ಫ್ರೀಡಂಪಾರ್ಕ್​ನಲ್ಲಿ ನೌಕರರ ಸಮ್ಮುಖದಲ್ಲಿ ಘೋಷಣೆ ಮಾಡಿದರು. ಸರ್ಕಾರದಿಂದ ಲಿಖಿತ ಭರವಸೆ ದೊರತಿರುವ ಹಿನ್ನೆಲೆಯಲ್ಲಿ ಮುಷ್ಕರ ವಾಪಸ್ ಪಡೆದಿದ್ದೇವೆ ಎಂದು ಅವರು ತಿಳಿಸಿದರು. ಸಂಜೆಯಿಂದ ಬಸ್ ಸಂಚಾರ ಆರಂಭ: ಮುಷ್ಕರ ವಾಪಸ್ ಪಡೆದಿರುವ ಹಿನ್ನೆಲೆಯಲ್ಲಿ ಇಂದು ಸಂಜೆಯಿಂದಲೇ ಬಸ್ ಸಂಚಾರ ಆರಂಭವಾಗಿದೆ. ನಾಳೆಯಿಂದ […]