ಪೋಷಕರ ಮೇಲೆ ಒತ್ತಡ ಹೇರಿ ಹೇಳಿಕೆ ಪಡೆಯಲಾಗಿದೆ: ಸಿಡಿಲೇಡಿಯ ಸ್ಫೋಟಕ ಹೇಳಿಕೆ
ಬೆಂಗಳೂರು: ಸಿಡಿ ಪ್ರಕರಣ ಕ್ಷಣ ಕ್ಷಣಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇಂದು (ಶನಿವಾರ) ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ಹಾಗೂ ಸಿಡಿಲೇಡಿಯ ಪೋಷಕರು ವಾಗ್ದಾಳಿ ನಡೆಸಿದ ಬೆನ್ನಲ್ಲೆ ಯುವತಿಯಿಂದ ಮತ್ತೊಂದು ವಿಡಿಯೋ (5ನೇ) ರಿಲೀಸ್ ಆಗಿದೆ. ಇಂದಿನ ಬೆಳವಣಿಗೆಯಿಂದ ಭಯ ಆಗ್ತಿದೆ. ನಮ್ಮ ಅಪ್ಪ-ಅಮ್ಮನಿಗೆ ಏನು ಗೊತ್ತಿಲ್ಲ. ಪ್ರಕರಣವನ್ನು ಬೇರೆ ಕಡೆ ತಿರುಗಿಸುತ್ತಿದ್ದಾರೆ. ನಮ್ಮವರನ್ನು ಬ್ಲಾಕ್ಮೇಲ್ ಮಾಡಲಾಗಿದೆ ಎಂದು ಯುವತಿ ಹೇಳಿಕೊಂಡಿದ್ದಾಳೆ. ಮಗಳನ್ನು ಡಿ.ಕೆ. ಶಿವಕುಮಾರ್ ಒತ್ತೆಯಾಳಾಗಿಟ್ಟುಕೊಂಡಿದ್ದಾರೆ ಎಂದು ಪೋಷಕರ ಹೇಳಿಕೆಯ ಬೆನ್ನಲ್ಲೇ ಯುವತಿ ವಿಡಿಯೋ ಹರಿಬಿಟ್ಟಿದ್ದಾಳೆ. […]