ರಾಜ್ಯಾದ್ಯಂತ ನೈಟ್ ಕರ್ಫ್ಯೂ, ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ; ಹೊಸ ಮಾರ್ಗಸೂಚಿ ಪ್ರಕಟ
ಬೆಂಗಳೂರು: ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೊನಾ ಸೋಂಕಿನ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರವು ಕೇರಳ, ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಹಾಗೂ ರಾಜ್ಯದಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಇದೀಗ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಮಾರ್ಗಸೂಚಿಯಲ್ಲಿ ಏನಿದೆ..? ಕೇರಳ, ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ಮಹಾರಾಷ್ಟ್ರ ಗಡಿ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಕಲ್ಬುರ್ಗಿ ಮತ್ತು ಕೇರಳ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರು, […]