ಕಲ್ಮಾಡಿ: ವೆಲಂಕಣಿ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಭಕ್ತಿ- ಸಡಗರದಿಂದ ಸಂಪನ್ನ

ಕಲ್ಮಾಡಿ: 1972 ರಲ್ಲಿ ಪುಟ್ಟ ಆರಾಧನಾ ಕೇಂದ್ರವಾಗಿ ಆರಂಭಗೊಂಡ ಕಲ್ಮಾಡಿಯ ಸ್ಟೆಲ್ಲಾ ಮಾರಿಸ್ ದೇವಾಲಯವು 1991 ರಲ್ಲಿ ಸ್ವತಂತ್ರ ದೇವಾಲಯವಾಗಿ ಗುರುತಿಸಿಕೊಂಡಿತು. 1988 ಅಗೋಸ್ಟ್ 15 ರಂದು ವೆಲಂಕಣಿ ಮಾತೆಯ ಮೂರ್ತಿಯನ್ನು ತಮಿಳುನಾಡಿನ ವೆಲಂಕಣಿ ಪುಣ್ಯಕ್ಷೇತ್ರದಿಂದ ತಂದು ಕಲ್ಮಾಡಿಯ ಸ್ಟೆಲ್ಲಾ ಮಾರಿಸ್ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಯಿತು. ಅಂದಿನಿಂದ ಪ್ರಾರಂಭಗೊಂಡ ವೆಲಂಕಣಿ ಮಾತೆಯ ಆರಾಧನೆಯು ಸಾವಿರಾರು ಭಕ್ತರನ್ನು ಈ ಕ್ಷೇತ್ರಕ್ಕೆ ಆಕರ್ಷಿಸುತ್ತಿದೆ. ಶಿಥಿಲಾವಸ್ಥೆಯಲ್ಲಿದ್ದ ಈ ದೇವಾಲಯವನ್ನು 2018 ರಲ್ಲಿ ಹಡಗಿನ ರೂಪವನ್ನು ಹೋಲುವ ಬೃಹತ್ ದೇವಾಲಯವಾಗಿ ನಿರ್ಮಿಸಲಾಯಿತು. ಈ ದೇವಾಲಯದ […]

ಕಲ್ಮಾಡಿ ವೆಲಂಕಣಿ ಮಾತೆಯ ವಾರ್ಷಿಕ ಮಹೋತ್ಸವ ಮೆರವಣಿಗೆ ಸಂಪನ್ನ

ಉಡುಪಿ: ಸ್ಟೆಲ್ಲಾ ಮಾರಿಸ್ ಚರ್ಚ್ ಕಲ್ಮಾಡಿ ಇಲ್ಲಿನ ವೆಲಂಕಣಿ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಪ್ರಯುಕ್ತ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಗೆಯು ಆದಿವುಡುಪಿಯಿಂದ ಕಲ್ಮಾಡಿ ಚರ್ಚಿನವರೆಗೆ ನಡೆಯಿತು. ಪುಣ್ಯಕ್ಷೇತ್ರದ ರೆಕ್ಟರ್ ವಂದನೀಯ ಬ್ಯಾಪ್ಟಿಸ್ಟ್ ಮಿನೇಜಸ್ ಅವರು ಧರ್ಮಾಧ್ಯಕ್ಷರಿಗೆ ಹಾಗೂ ನೆರೆದ ಭಕ್ತಾದಿಗಳಿಗೆ ಸ್ವಾಗತ ಕೋರಿದರು. ಮಿಲಾಗ್ರಿಸ್ ಚರ್ಚಿ ಕಲ್ಯಾಣ್ಪುರದ ಸಹ ಗುರುಗಳಾದ ವಂದನೀಯ ಜೋಯ್ ಅಂದ್ರಾದೆ ಅವರು ದೇವರ ವಾಚನವನ್ನು ಓದಿ ಸಂದೇಶ ನೀಡಿದರು. ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷ ಅತೀ ವಂದನೀಯ ಡಾ| ಅಲೋಷಿಯಸ್ ಪಾವ್ಲ್ […]

ಆ.15 ರಂದು ಕಲ್ಮಾಡಿ ವೆಲಂಕಣಿ ಮಾತೆಯ ವಾರ್ಷಿಕ ಮಹೋತ್ಸವ

ಕಲ್ಮಾಡಿ ವೆಲಂಕಣಿ ಮಾತೆಯ ಪುಣ್ಯಕ್ಷೇತ್ರವು ಪ್ರಪಂಚದಾದ್ಯಂತ ಬಹಳ ಪ್ರಸಿದ್ಧವಾಗಿದೆ. ವೆಲಂಕಣಿ ಮಾತೆಯ ಪ್ರತಿಮೆಯನ್ನು ತಮಿಳುನಾಡಿನ ವೆಲಂಕಣಿ ಪುಣ್ಯಕ್ಷೇತ್ರದಿಂದ ತಂದು ಕಲ್ಮಾಡಿಯ ಸ್ಟೆಲ್ಲಾ ಮಾರಿಸ್‌ ದೇವಾಲಯದಲ್ಲಿ ಅಗಸ್ಟ್‌ 15, 1988 ರಲ್ಲಿ ಅಂದಿನ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿದ್ದ ಅತೀ ವಂದನೀಯ ಡಾ. ಬಾಸಿಲ್‌ ಡಿʼಸೋಜಾ ರವರು ಪ್ರತಿಷ್ಠಾಪಿಸಿದರು. ಅಂದಿನಿಂದ ಇಂದಿನವರೆಗೂ ವೆಲಂಕಣಿ ಮಾತೆಯ ಸ್ಮರಣೆ ನಿರಂತರವಾಗಿ ಈ ಕೇಂದ್ರದಲ್ಲಿ ನಡೆಯುತ್ತಿದೆ ಹಾಗೂ ಪ್ರತಿದಿನ ಹಲವಾರು ಭಕ್ತಾದಿಗಳು ಇಲ್ಲಿಗೆ ಭೇಟಿ ನೀಡುತ್ತಿದ್ದು ಅನೇಕ ಪವಾಡಗಳಿಗೆ ಸಾಕ್ಷಿಯಾಗಿದೆ. ಸ್ಟೆಲ್ಲಾ ಮಾರಿಸ್‌ ದೇವಾಲಯ […]

ಕಲ್ಮಾಡಿ ವೆಲಂಕಣಿ ಮಾತೆಯ ಕೇಂದ್ರ ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವೆಂದು ಘೋಷಣೆ

ಉಡುಪಿ: ವಿಶ್ವ ಪ್ರಸಿದ್ದ ಕಲ್ಮಾಡಿ ವೆಲಂಕಣಿ ಮಾತೆಯ ಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯಕ್ಕೆ ಒಳಪಟ್ಟ ಅಧಿಕೃತ ಪುಣ್ಯಕ್ಷೇತ್ರವೆಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ್ಯರಾದ ಅತಿ ವಂದನೀಯ ಡಾಕ್ಟರ್ ಜೆರಾಲ್ಡ್ ಐಸಾಕ್ ಲೋಬೋರವರು ಆಗಸ್ಟ್ 15 ರಂದು ವಿದ್ಯುಕ್ತವಾಗಿ ನಡೆದ ಪವಿತ್ರ ಬಲಿಪೂಜೆಯಲ್ಲಿ ಘೋಷಿಸಿದರು. ಉಡುಪಿ ಧರ್ಮಪ್ರಾಂತ್ಯದ ಕುಲಪತಿಗಳಾದ ಫಾದರ್ ಸ್ಟ್ಯಾನಿ ಬಿ ಲೋಬೋ ಅವರು ಪುಣ್ಯಕ್ಷೇತ್ರದ ಘೋಷಣೆ ಪತ್ರವನ್ನು ವಾಚಿಸಿದರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ್ಯರಾದ ಡಾಕ್ಟರ್ ಜೆರಾಲ್ಡ್ ಐಸಾಕ್ ಲೋಬೋ ರವರು ದಿವ್ಯ ಬಲಿಪೂಜೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಬಲಿಪೂಜೆಯಲ್ಲಿ ಮಂಗಳೂರು […]

ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚಿನ ಸುವರ್ಣ ಮಹೋತ್ಸವ: ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆಗೆ ರಘುಪತಿ ಭಟ್ ರಿಂದ ಚಾಲನೆ

ಉಡುಪಿ: ಕಲ್ಮಾಡಿಯಲ್ಲಿನ ವೆಲಂಕಣಿ ಮಾತೆಯ ಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವೆಂದು ಘೋಷಣೆ ಮತ್ತು ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚಿನ ಸುವರ್ಣ ಮಹೋತ್ಸವದ ಸಂದರ್ಭ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ ಆದಿವುಡುಪಿ ಜಂಕ್ಷನ್ ನಿಂದ ಕಲ್ಮಾಡಿ ಚರ್ಚಿನವರೆಗೆ ನಡೆಯಿತು. ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ರಘುಪತಿ ಭಟ್‌ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಮ್ಮ ಕಾಲೇಜು ದಿನಗಳಲ್ಲಿ ಹೊಸ ವರುಷದಂದು ಕಲ್ಮಾಡಿ ಚರ್ಚಿಗೆ ಭೇಟಿ ನೀಡುತ್ತಿದ್ದನ್ನು ಅವರು ನೆನಪಿಸಿಕೊಂಡರು. ಉಡುಪಿ ಧರ್ಮಕ್ಷೇತ್ರದಲ್ಲಿ ಅತ್ತೂರು, ಕೆರೆಕಟ್ಟೆ ಬಳಿಕ […]