ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಕ್ಕೆ ಕ್ರಮ: ಸಚಿವ ಲಕ್ಷ್ಮಣ ಸವದಿ

ಉಡುಪಿ: ರಾಜ್ಯದ ನಗರ ಸಾರಿಗೆಯಲ್ಲಿ ಎಲೆಕ್ಟ್ರಿಕ್‌ ಬಸ್ ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಈಗಾಗಲೇ ಬೆಂಗಳೂರಿನಲ್ಲಿ 350 ಎಲೆಕ್ಟ್ರಿಕ್ ಬಸ್ ಗಳನ್ನು ಲೀಸ್ ಗೆ ಪಡೆದು ಓಡಾಟ ಆರಂಭಿಸಲು ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು , ಬೆಂಗಳೂರಿನಲ್ಲಿ ಫೆಬ್ರವರಿಯಲ್ಲಿ ಪ್ರಾಯೋಗಿಕವಾಗಿ ಸಂಚಾರ ಆರಂಭಗೊಳ್ಳಲಿದೆ ಎಂದು ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು. ಅವರು ಭಾನುವಾರ ಉಡುಪಿಯಲ್ಲಿ 395 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟಿಸಿ ಮಾತನಾಡಿದರು. ಕೇಂದ್ರ […]