ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ- ಸಚಿವ ಅರವಿಂದ ಲಿಂಬಾವಳಿ

ಉಡುಪಿ: ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯು ಬಹು ಕಾಳಜಿಯಿಂದ ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್‌ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಈ ಕ್ರಮದಿಂದಾಗಿ ತುಳು ಲಿಪಿಯು ಯುನಿಕೋಡ್‌ ನಕಾಶೆಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗುವ ಕಾರ್ಯವು ವೇಗ ಪಡೆಯಲಿದೆ ಎಂದು ಹೇಳಿರುವ ಅವರು, ಸುಮಾರು ಹತ್ತು ವರ್ಷಗಳಿಂದ ತುಳು ಲಿಪಿಯನ್ನು ರೂಪಿಸುವ ಬಗ್ಗೆ ಹಲವು ಚರ್ಚೆಗಳು […]