ಬಾಲಕಾರ್ಮಿಕತೆ ನಿಲ್ಲಿಸಿ, ಶಿಕ್ಷಣ ಒದಗಿಸಿ; ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ಆಗ್ರಹ
ಉಡುಪಿ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಆಯೋಜಿಸಿರುವಂತಹ “ಬಾಲಕಾರ್ಮಿಕತೆ ನಿಲ್ಲಿಸಿ, ಶಿಕ್ಷಣ ಒದಗಿಸಿ”. ಅಭಿಯಾನದ ಭಾಗವಾಗಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಸಾರ್ವಜನಿಕ ಶಿಕ್ಷಣದ ಉಪನಿರ್ದೇಶಕರು, ಕಾರ್ಮಿಕ ಇನ್ಸ್‌ಪೆಕ್ಟರ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿಯನ್ನು ನೀಡಲಾಯಿತು. ಗ್ರಾಮದಲ್ಲಿರುವ ಪ್ರತಿಯೊಂದು ವಿದ್ಯಾರ್ಥಿ ಕೂಡ ಶಿಕ್ಷಣದಿಂದ ವಂಚಿತರಾಗಬಾರದು, ಬಾಲ ಕಾರ್ಮಿಕತೆಗೆ ಒಳಗಾದ ಮಕ್ಕಳಿದ್ದರೆ ಅವರಿಗೆ ಶಿಕ್ಷಣ ಒದಗಿಸುವ ಯೋಜನೆಯನ್ನು ಸರ್ಕಾರ ರೂಪಿಸಬೇಕು, ಕಾರ್ಯಾಂಗ ವ್ಯವಸ್ಥೆಯನ್ನು ಸರಿಯಾಗಿ ಸದುಪಯೋಗಪಡಿಸಿ ತಳ […]