ಅಕ್ರಮ ಮರಳು ಗಣಿಗಾರಿಕೆ ತಡೆಯಲು ಕಾರ್ಯಪ್ರವೃತ್ತರಾಗಿ: ತಹಶೀಲ್ದಾರ್ ರವಿ ಎಸ್. ಅಂಗಡಿ

ಉಡುಪಿ: ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ತಕ್ಷಣವೇ ಅಧಿಕಾರಿಗಳು ಕಾರ್ಯಪ್ರವೃತರಾಗಿ ಮರಳು ಸಾಗಾಣಿಕೆಯನ್ನು ತಡೆಯಲು ಕ್ರಮಕೈಗೊಳ್ಳುವಂತೆ ಉಡುಪಿ ತಾಲೂಕು ತಹಶೀಲ್ದಾರ್ ರವಿ ಎಸ್ ಅಂಗಡಿ ಹೇಳಿದರು. ಅವರು ಶುಕ್ರವಾರ ಉಡುಪಿ ತಾಲೂಕು ಕಚೇರಿಯಲ್ಲಿ ಉಡುಪಿ ತಾಲೂಕು ಮರಳು ಉಪಖನಿಜ ಅಕ್ರಮ ಸಾಗಾಣಿಕೆ, ದಾಸ್ತಾನು ವಿಷಯಗಳ ಕುರಿತು ಟಾಸ್ಕ್ಫೋರ್ಸ್ ಸಮಿತಿ ಸದಸ್ಯರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಸೂಚಿಸಲಾದ ಇಲಾಖೆಗಳು ನಿಗಧಿಪಡಿಸಿದ ದಿನಗಳಂದು ಗಸ್ತು […]