ರಾಜ್ಯದಲ್ಲಿ ಲವ್ ಜಿಹಾದ್ ಕೊನೆಗಾಣಿಸಲು ಕಠಿಣ ಕ್ರಮ: ಸಿಎಂ ಯಡಿಯೂರಪ್ಪ

ಮಂಗಳೂರು: ರಾಜ್ಯದಲ್ಲಿ ಲವ್ ಜಿಹಾದ್ ಕೊನೆಗಾಣಿಸಲು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಅವರು ಗುರುವಾರ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೊಳಿಸಿ, ಹಣದ ಆಮಿಷವೊಡ್ಡಿ ಪ್ರೀತಿ ಪ್ರೇಮದಲ್ಲಿ ಹೆಸರಿನಲ್ಲಿ ನಡೆಯುವ ಮತಾಂತರಕ್ಕೆ ಕಡಿವಾಣ ಹಾಕುತ್ತೇವೆ ಎಂದರು. 18 ಮಂದಿ ಶಾಸಕರ ಸಹಾಯದಿಂದ ನಾವು ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದೇವೆ. ಮುಂದೆ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಪಕ್ಷ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ […]